ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
Cross references
ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.