ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
Cross references
ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.