Home Bibles ಆದಿಕಾಂಡ 28:5 · ಕನ್ನಡ ಬೈಬಲ್
ಆದಿಕಾಂಡ 28:5 · ಕನ್ನಡ ಬೈಬಲ್

ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.

Cross references

ಆದಿಕಾಂಡ 22:23

ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.

ಆದಿಕಾಂಡ 24:54

ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.

ಆದಿಕಾಂಡ 25:20

ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್‌ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.

ಆದಿಕಾಂಡ 28:2

ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್‌ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.

ಆದಿಕಾಂಡ 29:1

ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.

ಆದಿಕಾಂಡ 31:24

ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.

ಆದಿಕಾಂಡ 35:27

ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್‌ ಎಂಬ ಅರ್ಬದ ಪಟ್ಟಣಕ್ಕೆ ಬಂದನು.

ದ್ವಿತೀಯೋಪದೇಶಕಾಂಡ 26:5

ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.

ಯೆಹೆಜ್ಕೇಲ 27:16

ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

Interlinear

Choose Theme