ಆದಿಕಾಂಡ 28:6 · ಕನ್ನಡ ಬೈಬಲ್
ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
Cross references
ಆದಿಕಾಂಡ 27:33
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
ಆದಿಕಾಂಡ 28:1
ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.