Home Bibles ಆದಿಕಾಂಡ 28:7 · ಕನ್ನಡ ಬೈಬಲ್
ಆದಿಕಾಂಡ 28:7 · ಕನ್ನಡ ಬೈಬಲ್

ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್‌ ಅರಾಮಿಗೆ ಹೋದದ್ದನ್ನೂ

Cross references

ಆದಿಕಾಂಡ 27:43

ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.

ನಿರ್ಗಮಕಾಂಡ 20:12

ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

ಲೇವ್ಯಕಾಂಡ 19:3

ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.

ಸಾಮೇತಿಗಳು 1:8

ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;

ಸಾಮೇತಿಗಳು 30:17

ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.

ಎಫೆಸದವರಿಗೆ 6:1

ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.

ಎಫೆಸದವರಿಗೆ 6:3

ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.

ಕೊಲೊಸ್ಸೆಯವರಿಗೆ 3:20

ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

Interlinear

Choose Theme