ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
Cross references
ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.