ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Cross references
ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.