ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
Cross references
ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.