ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
Cross references
ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
ಆಗ ಏಲಿಯು ಸಮುವೇಲನನ್ನು ಕರೆದು ಅವನಿಗೆ ನನ್ನ ಮಗನಾದ ಸಮುವೇಲನೇ ಅಂದನು.
ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,