ಆದಿಕಾಂಡ 31:20 · ಕನ್ನಡ ಬೈಬಲ್
ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.
Cross references
ಆದಿಕಾಂಡ 25:20
ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
ಆದಿಕಾಂಡ 31:27
ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
ದ್ವಿತೀಯೋಪದೇಶಕಾಂಡ 26:5
ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.