Home Bibles ಆದಿಕಾಂಡ 31:21 · ಕನ್ನಡ ಬೈಬಲ್
ಆದಿಕಾಂಡ 31:21 · ಕನ್ನಡ ಬೈಬಲ್

ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್‌ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.

Cross references

ಆದಿಕಾಂಡ 2:14

ಮೂರನೆಯ ನದಿಯ ಹೆಸರು ಹಿದ್ದೆಕೆಲ್‌; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್‌.

ಆದಿಕಾಂಡ 15:18

ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್‌ ನದಿಯ ವರೆಗೆ ವಾಸಿಸುವ

ಆದಿಕಾಂಡ 31:23

ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್‌ ಪರ್ವತದಲ್ಲಿ ಅವನನ್ನು ಸಂಧಿಸಿದನು.

ಆದಿಕಾಂಡ 37:25

ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.

ಆದಿಕಾಂಡ 46:28

ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.

ಅಂಕೆಗಳ ಪುಸ್ತಕ 24:1

ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.

ಅಂಕೆಗಳ ಪುಸ್ತಕ 32:1

ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

ದ್ವಿತೀಯೋಪದೇಶಕಾಂಡ 3:12

ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.

ಯೆಹೋಶುವ 13:8

ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:

ಯೆಹೋಶುವ 24:2

ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.

ನ್ಯಾಯಾಧಿಪತಿಗಳು 10:18

ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.

2 ಸಮುವೇಲ 24:6

ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

1 ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

2 ಅರಸುಗಳು 12:17

ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.

ಯೆರೆಮಿಯ 50:5

ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.

ಲೂಕ 9:51

ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು

Interlinear

Choose Theme