ಆದಿಕಾಂಡ 31:33 · ಕನ್ನಡ ಬೈಬಲ್
ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
Cross references
ಆದಿಕಾಂಡ 24:28
ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
ಆದಿಕಾಂಡ 24:67
ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.