Home Bibles ಆದಿಕಾಂಡ 32:11 · ಕನ್ನಡ ಬೈಬಲ್
ಆದಿಕಾಂಡ 32:11 · ಕನ್ನಡ ಬೈಬಲ್

ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.

Cross references

ಆದಿಕಾಂಡ 24:27

ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.

ಆದಿಕಾಂಡ 27:41

ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.

ದ್ವಿತೀಯೋಪದೇಶಕಾಂಡ 22:6

ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು;

1 ಸಮುವೇಲ 12:10

ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.

1 ಸಮುವೇಲ 24:15

ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.

2 ಸಮುವೇಲ 7:18

ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?

ಕೀರ್ತನೆಗಳು 16:1

ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.

ಕೀರ್ತನೆಗಳು 25:20

ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.

ಕೀರ್ತನೆಗಳು 31:2

ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.

ಕೀರ್ತನೆಗಳು 43:1

ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.

ಕೀರ್ತನೆಗಳು 59:1

ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.

ಕೀರ್ತನೆಗಳು 119:134

ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.

ಕೀರ್ತನೆಗಳು 142:6

ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.

ಸಾಮೇತಿಗಳು 18:19

ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.

ದಾನಿಯೇಲ 3:17

ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.

ಹೊಶೇಯ 10:14

ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್‌ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).

ಮತ್ತಾಯ 6:13

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

Interlinear

Choose Theme