Home Bibles ಆದಿಕಾಂಡ 32:2 · ಕನ್ನಡ ಬೈಬಲ್
ಆದಿಕಾಂಡ 32:2 · ಕನ್ನಡ ಬೈಬಲ್

ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್‌ ಎಂದು ಹೆಸರಿಟ್ಟನು.

Cross references

ಯೆಹೋಶುವ 5:14

ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.

ಯೆಹೋಶುವ 21:38

ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ

2 ಸಮುವೇಲ 2:8

ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ

2 ಸಮುವೇಲ 2:12

ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.

2 ಸಮುವೇಲ 17:24

ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.

2 ಸಮುವೇಲ 17:26

ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.

1 ಅರಸುಗಳು 2:8

ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.

1 ಅರಸುಗಳು 4:14

ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.

2 ಅರಸುಗಳು 6:17

ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.

ಕೀರ್ತನೆಗಳು 34:7

ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.

ಕೀರ್ತನೆಗಳು 103:21

ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.

ಕೀರ್ತನೆಗಳು 148:2

ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;

ಪರಮಗೀತ 6:13

ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?

ದಾನಿಯೇಲ 10:20

ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.

ಲೂಕ 2:13

ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--

Interlinear

Choose Theme