ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
Cross references
ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.