Home Bibles ಆದಿಕಾಂಡ 32:31 · ಕನ್ನಡ ಬೈಬಲ್
ಆದಿಕಾಂಡ 32:31 · ಕನ್ನಡ ಬೈಬಲ್

ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್‌ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.

Cross references

ಆದಿಕಾಂಡ 16:13

ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.

ಆದಿಕಾಂಡ 19:15

ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.

ಆದಿಕಾಂಡ 19:23

ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.

ಆದಿಕಾಂಡ 32:25

ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.

ನಿರ್ಗಮಕಾಂಡ 24:10

ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.

ನಿರ್ಗಮಕಾಂಡ 24:11

ಆದರೆ ಇಸ್ರಾಯೇಲ್‌ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.

ದ್ವಿತೀಯೋಪದೇಶಕಾಂಡ 5:24

ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.

ದ್ವಿತೀಯೋಪದೇಶಕಾಂಡ 5:26

ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?

ನ್ಯಾಯಾಧಿಪತಿಗಳು 6:22

ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.

ನ್ಯಾಯಾಧಿಪತಿಗಳು 6:23

ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.

ನ್ಯಾಯಾಧಿಪತಿಗಳು 8:8

ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.

1 ಅರಸುಗಳು 12:25

ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.

ಕೀರ್ತನೆಗಳು 38:17

ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.

ಯೆಶಾಯ 6:5

ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.

ಮಲಾಕಿ 4:2

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

2 ಕೊರಿಂಥದವರಿಗೆ 12:7

ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.

2 ಕೊರಿಂಥದವರಿಗೆ 12:9

ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.

Interlinear

Choose Theme