ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
Cross references
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.