ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
Cross references
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
ತಗ್ಗಿನಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.
ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.