Home Bibles ☰ Books ಆದಿಕಾಂಡ 33:3 · ಕನ್ನಡ ಬೈಬಲ್
ಆದಿಕಾಂಡ 33:3 · ಕನ್ನಡ ಬೈಬಲ್

ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.

Cross references

ಆದಿಕಾಂಡ 18:2

ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--

ಆದಿಕಾಂಡ 42:6

ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.

ಆದಿಕಾಂಡ 43:26

ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.

ಆದಿಕಾಂಡ 48:12

ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.

1 ಸಮುವೇಲ 2:5

ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.

ಸಾಮೇತಿಗಳು 6:3

ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.

ಸಭಾಪ್ರಸಂಗಿ 10:4

ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.

ಲೂಕ 14:11

ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಯೋಹಾನ 10:4

ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;

ಯೋಹಾನ 10:11

ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಯೋಹಾನ 10:15

ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.

Interlinear

Choose Theme