Home Genesis 34 · ಕನ್ನಡ ಬೈಬಲ್

Genesis

Chapter 34

ಕನ್ನಡ ಬೈಬಲ್
1ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
4ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
5ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
6ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.
7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
8ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
9ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
10ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
11ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
12ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
13ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
14ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
15ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
16ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
17ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.
18ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
19ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
20ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
21ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
22ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
23ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
25ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
26ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
27ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
28ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.
29ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.
30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
31ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme