Home Bibles ಆದಿಕಾಂಡ 34:1 · ಕನ್ನಡ ಬೈಬಲ್
ಆದಿಕಾಂಡ 34:1 · ಕನ್ನಡ ಬೈಬಲ್

ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.

Cross references

ಆದಿಕಾಂಡ 26:34

ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.

ಆದಿಕಾಂಡ 27:46

ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

ಆದಿಕಾಂಡ 28:6

ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್‌ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ

ಆದಿಕಾಂಡ 30:13

ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್‌ ಎಂದು ಹೆಸರಿಟ್ಟಳು.

ಆದಿಕಾಂಡ 30:21

ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.

ಆದಿಕಾಂಡ 46:15

ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್‌ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.

ಯೆರೆಮಿಯ 2:36

ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

1 ತಿಮೋಥೆಯ 5:13

ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.

ತೀತ 2:5

ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.

Interlinear

Choose Theme