ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
Cross references
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.