ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
Cross references
ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.