ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
Cross references
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.