Home Bibles ಆದಿಕಾಂಡ 35:12 · ಕನ್ನಡ ಬೈಬಲ್
ಆದಿಕಾಂಡ 35:12 · ಕನ್ನಡ ಬೈಬಲ್

ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.

Cross references

ಆದಿಕಾಂಡ 12:7

ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.

ಆದಿಕಾಂಡ 13:14

ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.

ಆದಿಕಾಂಡ 15:18

ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್‌ ನದಿಯ ವರೆಗೆ ವಾಸಿಸುವ

ಆದಿಕಾಂಡ 26:3

ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.

ಆದಿಕಾಂಡ 28:3

ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,

ಆದಿಕಾಂಡ 28:13

ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.

ಆದಿಕಾಂಡ 48:4

ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.

ನಿರ್ಗಮಕಾಂಡ 2:24

ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್‌ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.

ನಿರ್ಗಮಕಾಂಡ 3:8

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.

ಯೆಹೋಶುವ 6:1

ಆಗ ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.

ನೆಹೆಮ್ಯ 13:1

ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.

Interlinear

Choose Theme