ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
Cross references
ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.