ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್.
Cross references
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.