ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
Cross references
ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!