Home Bibles ಆದಿಕಾಂಡ 37:33 · ಕನ್ನಡ ಬೈಬಲ್
ಆದಿಕಾಂಡ 37:33 · ಕನ್ನಡ ಬೈಬಲ್

ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.

Cross references

ಆದಿಕಾಂಡ 37:20

ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಆದಿಕಾಂಡ 44:28

ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.

ಆದಿಕಾಂಡ 48:11

ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.

1 ಅರಸುಗಳು 13:24

ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.

2 ಅರಸುಗಳು 2:24

ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.

ಸಾಮೇತಿಗಳು 14:15

ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಯೋಹಾನ 13:7

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.

Interlinear

Choose Theme