Home Bibles ಆದಿಕಾಂಡ 38:2 · ಕನ್ನಡ ಬೈಬಲ್
ಆದಿಕಾಂಡ 38:2 · ಕನ್ನಡ ಬೈಬಲ್

ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.

Cross references

ಆದಿಕಾಂಡ 3:6

ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಆದಿಕಾಂಡ 6:2

ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.

ಆದಿಕಾಂಡ 6:4

ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.

ಆದಿಕಾಂಡ 24:3

ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ

ಆದಿಕಾಂಡ 28:1

ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.

ಆದಿಕಾಂಡ 34:2

ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.

ಆದಿಕಾಂಡ 46:12

ಯೆಹೂದನ ಮಕ್ಕಳು: ಏರ್‌ ಓನಾನ್‌ ಶೇಲಾಹ ಪೆರೆಚ್‌ ಜೆರಹ. ಆದರೆ ಏರನೂ ಓನಾನನೂ ಕಾನಾನ್‌ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್‌ ಹಾಮೂಲ್‌ ಎಂಬವರು.

ನ್ಯಾಯಾಧಿಪತಿಗಳು 14:2

ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.

ನ್ಯಾಯಾಧಿಪತಿಗಳು 16:1

ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.

2 ಸಮುವೇಲ 11:2

ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.

1 ದಿನವೃತ್ತಾಂತ 2:3

ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್‌ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.

2 ಕೊರಿಂಥದವರಿಗೆ 6:14

ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?

Interlinear

Choose Theme