Home Bibles ಆದಿಕಾಂಡ 39:6 · ಕನ್ನಡ ಬೈಬಲ್
ಆದಿಕಾಂಡ 39:6 · ಕನ್ನಡ ಬೈಬಲ್

ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.

Cross references

ಆದಿಕಾಂಡ 12:14

ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.

ಆದಿಕಾಂಡ 29:17

ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.

ಆದಿಕಾಂಡ 39:4

ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.

ಆದಿಕಾಂಡ 39:8

ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.

ಆದಿಕಾಂಡ 39:23

ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.

ಆದಿಕಾಂಡ 43:32

ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.

1 ಸಮುವೇಲ 16:12

ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.

1 ಸಮುವೇಲ 17:42

ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ

ಸಾಮೇತಿಗಳು 31:11

ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.

ಲೂಕ 16:10

ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.

ಲೂಕ 19:17

ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.

ಅಪೋಸ್ತಲರ ಕೃತ್ಯಗಳು 7:20

ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.

Interlinear

Choose Theme