ಆದಿಕಾಂಡ 4:19 · ಕನ್ನಡ ಬೈಬಲ್
ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
Cross references
ಆದಿಕಾಂಡ 2:18
ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
ಆದಿಕಾಂಡ 2:24
ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
2 ದಿನವೃತ್ತಾಂತ 24:3
ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
ಮತ್ತಾಯ 19:4
ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
ಮತ್ತಾಯ 19:8
ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.