Home Bibles ಆದಿಕಾಂಡ 40:11 · ಕನ್ನಡ ಬೈಬಲ್
ಆದಿಕಾಂಡ 40:11 · ಕನ್ನಡ ಬೈಬಲ್

ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.

Cross references

ಆದಿಕಾಂಡ 40:21

ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.

ಆದಿಕಾಂಡ 49:11

ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.

ಲೇವ್ಯಕಾಂಡ 10:9

ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.

1 ಅರಸುಗಳು 10:5

ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--

2 ದಿನವೃತ್ತಾಂತ 9:4

ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.

ನೆಹೆಮ್ಯ 1:11

ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.

ಸಾಮೇತಿಗಳು 3:10

ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.

Interlinear

Choose Theme