ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
Cross references
ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ