ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
Cross references
ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.