Cross references
ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.