ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
Cross references
ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;
ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.