Home Bibles ಆದಿಕಾಂಡ 41:6 · ಕನ್ನಡ ಬೈಬಲ್
ಆದಿಕಾಂಡ 41:6 · ಕನ್ನಡ ಬೈಬಲ್

ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.

Cross references

ಆದಿಕಾಂಡ 41:23

ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.

ಯೆಹೆಜ್ಕೇಲ 17:10

ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.

ಯೆಹೆಜ್ಕೇಲ 19:12

ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.

ಹೊಶೇಯ 13:15

ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.

ಯೋನ 4:8

ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.

Interlinear

Choose Theme