Home Bibles ಆದಿಕಾಂಡ 42:1 · ಕನ್ನಡ ಬೈಬಲ್
ಆದಿಕಾಂಡ 42:1 · ಕನ್ನಡ ಬೈಬಲ್

ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.

Cross references

ಆದಿಕಾಂಡ 41:54

ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.

ಆದಿಕಾಂಡ 41:57

ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.

ಆದಿಕಾಂಡ 42:2

ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.

ನಿರ್ಗಮಕಾಂಡ 5:19

ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್‌ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.

ನಿರ್ಗಮಕಾಂಡ 20:18

ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.

ಯೆಹೋಶುವ 7:10

ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?

1 ಅರಸುಗಳು 19:3

ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

2 ಅರಸುಗಳು 8:3

ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.

ಎಜ್ರಾ 10:4

ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.

ಯೆರೆಮಿಯ 8:14

ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.

ಹೊಶೇಯ 5:13

ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

ಅಪೋಸ್ತಲರ ಕೃತ್ಯಗಳು 7:12

ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.

ಗಲಾತ್ಯದವರಿಗೆ 2:7

ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.

Interlinear

Choose Theme