Home Bibles ಆದಿಕಾಂಡ 42:13 · ಕನ್ನಡ ಬೈಬಲ್
ಆದಿಕಾಂಡ 42:13 · ಕನ್ನಡ ಬೈಬಲ್

ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್‌ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.

Cross references

ಆದಿಕಾಂಡ 29:32

ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.

ಆದಿಕಾಂಡ 30:6

ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್‌ ಎಂದು ಹೆಸರಿಟ್ಟಳು.

ಆದಿಕಾಂಡ 35:16

ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.

ಆದಿಕಾಂಡ 37:30

ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.

ಆದಿಕಾಂಡ 42:11

ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.

ಆದಿಕಾಂಡ 42:32

ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್‌ ದೇಶದಲ್ಲಿ ಇದ್ದಾನೆ ಅಂದೆವು.

ಆದಿಕಾಂಡ 42:36

ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.

ಆದಿಕಾಂಡ 42:38

ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.

ಆದಿಕಾಂಡ 43:7

ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.

ಆದಿಕಾಂಡ 43:29

ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.

ಆದಿಕಾಂಡ 44:20

ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.

ಆದಿಕಾಂಡ 44:28

ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.

ಆದಿಕಾಂಡ 45:26

ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.

ಆದಿಕಾಂಡ 46:8

ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.

ನಿರ್ಗಮಕಾಂಡ 1:2

ರೂಬೇನ್‌ ಸಿಮೆಯೋನ್‌ ಲೇವಿ ಯೆಹೂದ

ಅಂಕೆಗಳ ಪುಸ್ತಕ 1:1

ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--

ಅಂಕೆಗಳ ಪುಸ್ತಕ 10:1

ಕರ್ತನು ಮೋಶೆಗೆ ಹೇಳಿದ್ದೇನೆಂದರೆ

ಅಂಕೆಗಳ ಪುಸ್ತಕ 26:1

ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--

ಅಂಕೆಗಳ ಪುಸ್ತಕ 34:1

ಕರ್ತನು ಮೋಶೆಯ ಸಂಗಡ ಮಾತನಾಡಿ--

1 ದಿನವೃತ್ತಾಂತ 2:1

ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,

ಯೆರೆಮಿಯ 31:15

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.

ವಿಲಾಪಗಳು 5:7

ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.

ಮತ್ತಾಯ 2:16

ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ

ಮತ್ತಾಯ 2:18

ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.

Interlinear

Choose Theme