ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
Cross references
ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.