ಆದಿಕಾಂಡ 42:32 · ಕನ್ನಡ ಬೈಬಲ್
ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
Cross references
ಆದಿಕಾಂಡ 37:30
ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
ಆದಿಕಾಂಡ 42:13
ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
ಕೀರ್ತನೆಗಳು 68:27
ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.