Home Bibles ☰ Books ಆದಿಕಾಂಡ 42:34 · ಕನ್ನಡ ಬೈಬಲ್
ಆದಿಕಾಂಡ 42:34 · ಕನ್ನಡ ಬೈಬಲ್

ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.

Cross references

ಆದಿಕಾಂಡ 20:15

ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.

ಆದಿಕಾಂಡ 34:10

ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.

ಆದಿಕಾಂಡ 34:21

ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.

ಆದಿಕಾಂಡ 42:15

ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.

ಆದಿಕಾಂಡ 42:20

ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.

1 ಅರಸುಗಳು 10:15

ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.

ಯೆಹೆಜ್ಕೇಲ 17:4

ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.

Interlinear

Choose Theme