Home Bibles ಆದಿಕಾಂಡ 43:8 · ಕನ್ನಡ ಬೈಬಲ್
ಆದಿಕಾಂಡ 43:8 · ಕನ್ನಡ ಬೈಬಲ್

ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.

Cross references

ಆದಿಕಾಂಡ 42:2

ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.

ಆದಿಕಾಂಡ 42:38

ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.

ಆದಿಕಾಂಡ 44:26

ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.

ಆದಿಕಾಂಡ 45:19

ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.

ಆದಿಕಾಂಡ 50:8

ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್‌ ಸೀಮೆಯಲ್ಲಿ ಬಿಟ್ಟರು.

ಆದಿಕಾಂಡ 50:21

ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.

ನಿರ್ಗಮಕಾಂಡ 20:12

ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

ಅಂಕೆಗಳ ಪುಸ್ತಕ 14:31

ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.

ದ್ವಿತೀಯೋಪದೇಶಕಾಂಡ 33:6

ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.

2 ಅರಸುಗಳು 7:4

ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.

2 ಅರಸುಗಳು 7:13

ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.

ಎಜ್ರಾ 8:21

ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.

ಕೀರ್ತನೆಗಳು 118:17

ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.

Interlinear

Choose Theme