ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
Cross references
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.