ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
Cross references
ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.