Home Bibles ಆದಿಕಾಂಡ 44:29 · ಕನ್ನಡ ಬೈಬಲ್
ಆದಿಕಾಂಡ 44:29 · ಕನ್ನಡ ಬೈಬಲ್

(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.

Cross references

ಆದಿಕಾಂಡ 37:35

ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.

ಆದಿಕಾಂಡ 42:4

ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.

ಆದಿಕಾಂಡ 42:36

ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.

ಆದಿಕಾಂಡ 42:38

ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.

ಆದಿಕಾಂಡ 43:14

ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.

ಆದಿಕಾಂಡ 44:31

ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.

ದ್ವಿತೀಯೋಪದೇಶಕಾಂಡ 31:17

ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

ಕೀರ್ತನೆಗಳು 88:3

ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.

Interlinear

Choose Theme