Home Bibles ಆದಿಕಾಂಡ 44:5 · ಕನ್ನಡ ಬೈಬಲ್
ಆದಿಕಾಂಡ 44:5 · ಕನ್ನಡ ಬೈಬಲ್

ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.

Cross references

ಆದಿಕಾಂಡ 30:27

ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.

ಆದಿಕಾಂಡ 44:15

ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.

ಲೇವ್ಯಕಾಂಡ 19:26

ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.

ದ್ವಿತೀಯೋಪದೇಶಕಾಂಡ 18:10

ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ

1 ಅರಸುಗಳು 20:33

ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.

2 ಅರಸುಗಳು 21:6

ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.

Interlinear

Choose Theme