Home Bibles ಆದಿಕಾಂಡ 44:8 · ಕನ್ನಡ ಬೈಬಲ್
ಆದಿಕಾಂಡ 44:8 · ಕನ್ನಡ ಬೈಬಲ್

ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್‌ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?

Cross references

ಆದಿಕಾಂಡ 42:21

ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ಆದಿಕಾಂಡ 42:27

ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.

ಆದಿಕಾಂಡ 42:35

ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.

ಆದಿಕಾಂಡ 43:12

ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.

ಆದಿಕಾಂಡ 43:18

ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.

ಆದಿಕಾಂಡ 43:21

ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.

ಆದಿಕಾಂಡ 44:7

ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.

ನಿರ್ಗಮಕಾಂಡ 20:15

ಕದಿಯಬಾರದು.

ಮತ್ತಾಯ 19:18

ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.

ರೋಮಾಪುರದವರಿಗೆ 13:9

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ಯಾಕೋಬ 2:10

ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

Interlinear

Choose Theme