ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
Cross references
ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.